ಕೀರ್ತನೆಗಳು 32:2 - ಕನ್ನಡ ಸತ್ಯವೇದವು J.V. (BSI)2 ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು. ಅಧ್ಯಾಯವನ್ನು ನೋಡಿ |