Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:9 - ಕನ್ನಡ ಸತ್ಯವೇದವು J.V. (BSI)

9 [ಆದದರಿಂದ] ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರುಕಡಿವಾಣಗಳಿಂದಲ್ಲದೆ ಸ್ವಾಧೀನವಾಗುವದಿಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:9
9 ತಿಳಿವುಗಳ ಹೋಲಿಕೆ  

ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ ಎಂದು ಹೇಳಿಕೊಳ್ಳುವದೇ ಇಲ್ಲ.


ನಾವು ಕುದುರೆಗಳನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದಿರುವಾಗ ಅವುಗಳ ಬಾಯಿಗೆ ಕಡಿವಾಣಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.


ಅದರ ಹೊರಬಟ್ಟೆಯನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು