Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:11 - ಕನ್ನಡ ಸತ್ಯವೇದವು J.V. (BSI)

11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:11
20 ತಿಳಿವುಗಳ ಹೋಲಿಕೆ  

ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].


[ಇವರು ಹರಟಿಕೊಳ್ಳುವದೇನಂದರೆ] - ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಮಾತನ್ನು ತಿಳಿಯಪಡಿಸುತ್ತಾನೆ? ಮೊಲೆ ಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಈಗ, ಕಂದಾ, ನನ್ನ ಕಡೆಗೆ ಕಿವಿಗೊಡು, ನನ್ನ ಮಾತುಗಳನ್ನು ಆಲಿಸು.


ಮಕ್ಕಳಿರಾ, ತಂದೆಯ ಶಿಕ್ಷಣವನ್ನು ಕೇಳಿರಿ, ವಿವೇಕವನ್ನು ಗ್ರಹಿಸಲಿಕ್ಕೆ ಕಿವಿಗೊಡಿರಿ.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಹುಡುಗನನ್ನು ಶಿಕ್ಷಿಸು; ಮುಪ್ಪಿನಲ್ಲಿಯೂ ಓರೆಯಾಗನು.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಪ್ರಿಯ ಮಕ್ಕಳೇ, ಇನ್ನು ಸ್ವಲ್ಪಕಾಲವೇ ನಿಮ್ಮ ಸಂಗಡ ಇರುತ್ತೇನೆ. ನನ್ನನ್ನು ಹುಡುಕುವಿರಿ, ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆ ಈಗ ನಿಮಗೂ ಹೇಳುತ್ತೇನೆ.


ಮೃಗೇಂದ್ರನು ಆಹಾರವಿಲ್ಲದೆ ಸತ್ತು ಸಿಂಹದ ಮರಿಗಳು ಚದರಿಹೋಗುವವು.


ಯೆಹೋವನು ನನಗೆ ಕುರುಬನು; ಕೊರತೆಪಡೆನು.


ಆತನು ಬಾಯಾರಿದವರ ಆಶೆಯನ್ನು ಪೂರೈಸಿ ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.


ಅವನ ಮನೆಯಲ್ಲಿ ಧನೈಶ್ವರ್ಯಗಳಿರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು