Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:13 - ಕನ್ನಡ ಸತ್ಯವೇದವು J.V. (BSI)

13 ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು, ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:13
22 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು; ನನ್ನ ತುಟಿಗಳೆಂಬ ಕದವನ್ನು ಕಾಯಿ.


ತನ್ನ ಬಾಯನ್ನೂ ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ;


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಪೂರ್ವಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ಸುಳ್ಳುತುಟಿ ಯೆಹೋವನಿಗೆ ಹೇಸು; ಸತ್ಯವಂತರು ಆತನಿಗೆ ಲೇಸು.


ಸತ್ಯದ ತುಟಿ ಶಾಶ್ವತ; ಸುಳ್ಳಿನ ನಾಲಿಗೆ ಕ್ಷಣಿಕ.


ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.


ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ


ಜೀವನಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು.


ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗುವನು.


ಅದರೊಳಗೆಲ್ಲಾ ನಾಶನವೇ; ತಿಪ್ಪಲಾಟವೂ ವಂಚನೆಯೂ ಅದರ ಬೀದಿಗಳಿಂದ ತೊಲಗವು.


ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು; ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವದು.


ಬಾಯಿಂದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ಕೆಟ್ಟದ್ದನ್ನಲ್ಲ, ಒಳ್ಳೆಯದನ್ನು ಅನುಸರಿಸಿರಿ, ಬಾಳುವಿರಿ; ನೀವು ಅಂದುಕೊಂಡಂತೆ ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು