Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:14 - ಕನ್ನಡ ಸತ್ಯವೇದವು J.V. (BSI)

14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:14
26 ತಿಳಿವುಗಳ ಹೋಲಿಕೆ  

ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ [ದೇಶದಲ್ಲಿ] ವಾಸವಾಗಿರುವಿ.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಜ್ಞಾನಿಯ ಬೋಧೆ ಜೀವದ ಬುಗ್ಗೆ; ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.


ನಾನು ಸಮಾಧಾನಪ್ರಿಯನು; ಅವರೋ, ಮಾತಾಡಿದರೆ ಯುದ್ಧಕ್ಕೆ ಬರುತ್ತಾರೆ.


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.


ಸೊಟ್ಟ ಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ತುಟಿಗಳ ವಕ್ರತೆಯನ್ನು ದೂರಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು