Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ; ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:9
13 ತಿಳಿವುಗಳ ಹೋಲಿಕೆ  

ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ಯೆಹೋವನು ನನಗೆ ಕುರುಬನು; ಕೊರತೆಪಡೆನು.


ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿ ತೀರಿಸುತ್ತಾನೆ.


ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು