Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ವ್ಯಾಜ್ಯವಾಡು; ನನ್ನ ಮೇಲೆ ಯುದ್ಧಮಾಡುವವರ ಸಂಗಡ ಯುದ್ಧಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ಸಂಗಡ ವ್ಯಾಜ್ಯ ಮಾಡುವವರ ಸಂಗಡ ವ್ಯಾಜ್ಯ ಮಾಡಿರಿ; ನನಗೆ ವಿರೋಧವಾಗಿ ಯುದ್ಧ ಮಾಡುವವರ ಸಂಗಡ ಯುದ್ಧಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:1
16 ತಿಳಿವುಗಳ ಹೋಲಿಕೆ  

ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡಿಸು; ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ಅವರ ರಕ್ಷಕನು ಬಲಶಾಲಿಯಾಗಿದ್ದಾನೆ; ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.


ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ ನನ್ನ ಪ್ರಾಣವನ್ನು ಉಳಿಸಿದ್ದೀ.


ಯೆಹೋವನೇ ಅವರ ವ್ಯಾಜ್ಯವನ್ನು ನಡಿಸಿ ಸೂರೆಮಾಡಿದವರ ಜೀವವನ್ನು ಸೂರೆ ಮಾಡುವನು.


ಯೆಹೋವನು ನ್ಯಾಯಾಧಿಪತಿಯಾಗಿ ನವ್ಮಿುಬ್ಬರ ವ್ಯಾಜ್ಯವನ್ನು ತೀರಿಸಲಿ; ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಗೆ ತಪ್ಪಿಸಲಿ ಎಂದು ಹೇಳಿದನು.


ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.


ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.


ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು - ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಾಣಬರುವದಿಲ್ಲ; ಆತ್ಮವಾಗಲಿ ದೇವದೂತನಾಗಲಿ ಅವನ ಸಂಗಡ ಮಾತಾಡಿದ್ದರೂ ಮಾತಾಡಿರಬಹುದು ಎಂದು ವಾಗ್ವಾದಮಾಡಿದರು.


ನಾನು ಯೆಹೋವನಿಗೆ ಪಾಪಮಾಡಿದ್ದರಿಂದ ಆತನ ರೋಷವನ್ನು ತಾಳಿಕೊಂಡಿರುವೆನು; ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ ನನಗೆ ನ್ಯಾಯವನ್ನು ತೀರಿಸುವನು; ನನ್ನನ್ನು ಬೆಳಕಿಗೆ ತರುವನು, ಆತನ ರಕ್ಷಣಧರ್ಮವನ್ನು ನೋಡುವೆನು.


ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಬರುವದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.


ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.


ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು.


ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು