ಕೀರ್ತನೆಗಳು 35:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರೇ, “ನಿಮ್ಮ ಹಾಗೆ ಯಾರು ಇದ್ದಾರೆ? ಬಡವನನ್ನು ಅವನಿಗಿಂತ ಬಲಿಷ್ಠನಿಂದ ಕಾಪಾಡುತ್ತೀರಿ ದರಿದ್ರನನ್ನೂ, ಕೊರತೆಯುಳ್ಳವನನ್ನೂ ಸುಲಿದುಕೊಳ್ಳುವವನಿಂದ ಬಿಡಿಸುತ್ತೀರಿ,” ಎಂದು ನನ್ನ ಪೂರ್ಣ ಪ್ರಾಣವೇ ಹೇಳುವುದು. ಅಧ್ಯಾಯವನ್ನು ನೋಡಿ |