Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:17 - ಕನ್ನಡ ಸತ್ಯವೇದವು J.V. (BSI)

17 ಕರ್ತನೇ, ಇನ್ನೆಷ್ಟರವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇನ್ನೆಷ್ಟರವರೆಗೆ ಪ್ರಭು, ನೀ ಸುಮ್ಮನಿರುವೆ ನೋಡುತ? I ಬಿಡಿಸೆನ್ನ ಹಾವಳಿಯಿಂದ, ಸಿಂಹಗಳ ಬಾಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಒಡೆಯನೇ, ಇವುಗಳನ್ನು ಇನ್ನೆಷ್ಟುಕಾಲ ನೋಡುತ್ತಾ ಇರುವೆ? ಅವರು ನನ್ನನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ನನ್ನ ಪ್ರಾಣವನ್ನು ರಕ್ಷಿಸು; ಸಿಂಹಗಳಂತಿರುವ ಆ ದುಷ್ಟರಿಂದ ನನ್ನ ಪ್ರಿಯ ಪ್ರಾಣವನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ಎಷ್ಟರವರೆಗೆ ನೀವು ಸುಮ್ಮನೆ ನೋಡುತ್ತಾ ಇರುವಿರಿ? ಅವರ ಅಪಾಯಗಳಿಂದ ನನ್ನ ಪ್ರಾಣವನ್ನು ಬಿಡಿಸಿರಿ. ಆ ಸಿಂಹಗಳಿಂದ ನನ್ನ ಅಮೂಲ್ಯ ಪ್ರಾಣವನ್ನೂ ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:17
11 ತಿಳಿವುಗಳ ಹೋಲಿಕೆ  

ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ; ಯೆಹೋವನೇ, ಎಷ್ಟರವರೆಗೂ [ನನ್ನ ಕೈ ಬಿಟ್ಟಿರುವಿ]?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು