Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:23 - ಕನ್ನಡ ಸತ್ಯವೇದವು J.V. (BSI)

23 ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚತ್ತು ನನ್ನ ವಿವಾದವನ್ನು ವಿಚಾರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ನ್ಯಾಯವನು ನಿರ್ಣಯಿಸು ದೇವಾ ಎಚ್ಚೆತ್ತು I ನನ್ನ ವಿವಾದವನು ವಿಚಾರಿಸು ಪ್ರಭು ನೀನೆದ್ದು ನಿಂತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಎಚ್ಚರಗೊಳ್ಳು! ಎದ್ದೇಳು! ನನ್ನ ದೇವರೇ, ಯೆಹೋವನೇ, ನನಗಾಗಿ ಹೋರಾಡು; ನನಗೆ ನ್ಯಾಯವನ್ನು ದೊರಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನ ದೇವರೇ, ನನ್ನ ಯೆಹೋವ ದೇವರೇ, ನನ್ನ ನ್ಯಾಯವನ್ನು ನಿರ್ಣಯಿಸಿರಿ, ನನ್ನ ವ್ಯಾಜ್ಯದ ಪರವಾಗಿ ಎದ್ದೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:23
14 ತಿಳಿವುಗಳ ಹೋಲಿಕೆ  

ಕರ್ತನೇ, ಯಾಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ನಮ್ಮನ್ನು ಬಿಟ್ಟೇಬಿಡಬೇಡ.


ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದು ಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.


ತೋಮನು ಆತನಿಗೆ - ನನ್ನ ಸ್ವಾಮೀ, ನನ್ನ ದೇವರು! ಎಂದು ಹೇಳಿದನು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಯೆಹೋವನೇ, ನಾನು ನಿನಗೆ - ನೀನೇ ನನ್ನ ಶರಣನೂ ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದೀ ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ಅವನು ನನ್ನೊಡನೆ - ನನ್ನ ತಂದೆಯೂ ದೇವರೂ ಆಶ್ರಯದುರ್ಗವೂ ನೀನೇ ಎಂದು ಹೇಳುವನು.


ಎಫ್ರಾಯೀಮ್ ಬೆನ್ಯಾಮೀನ್ ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು.


ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಓಡಿಬಂದು ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯ ಮಾಡು.


ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಹ ಆರೋಹಣಮಾಡು.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಯಾಕೆ ವಿಮುಖನಾಗಿದ್ದೀ? ನಮಗಿರುವ ಬಾಧೆಯನ್ನೂ ಹಿಂಸೆಯನ್ನೂ ಯಾಕೆ ಲಕ್ಷಿಸುವದಿಲ್ಲ?


ದೇವರೇ, ಎದ್ದು ನಿನ್ನ ನ್ಯಾಯವನ್ನು ನಡಿಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವದನ್ನು ಜ್ಞಾಪಿಸಿಕೋ.


ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡಿಸು; ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು