Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:24 - ಕನ್ನಡ ಸತ್ಯವೇದವು J.V. (BSI)

24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೇ, ದೇವಾ, ನಿನ್ನ ನೀತಿಗನುಸಾರ ತೀರ್ಪುಕೊಡು I ಶತ್ರುಗಳೆನ್ನ ವಿಷಯದಲ್ಲಿ ಹರ್ಷಗೊಳ್ಳದಂತೆ ಮಾಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರೇ, ನನ್ನ ದೇವರೇ, ನಿಮ್ಮ ನೀತಿಯ ಪ್ರಕಾರ ನನಗೆ ನ್ಯಾಯತೀರಿಸಿರಿ; ಅವರು ನನ್ನ ವಿರುದ್ಧ ಸಂತೋಷಪಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:24
9 ತಿಳಿವುಗಳ ಹೋಲಿಕೆ  

ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ;


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು