ಕೀರ್ತನೆಗಳು 35:26 - ಕನ್ನಡ ಸತ್ಯವೇದವು J.V. (BSI)26 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ. ಅಧ್ಯಾಯವನ್ನು ನೋಡಿ |