Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:9 - ಕನ್ನಡ ಸತ್ಯವೇದವು J.V. (BSI)

9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವದು; ಆತನಿಂದಾದ ರಕ್ಷಣೆಯ ನಿವಿುತ್ತ ಆನಂದಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು ಯೆಹೋವನಲ್ಲಿ ಹರ್ಷಿಸುವೆನು. ಆತನು ನನ್ನನ್ನು ರಕ್ಷಿಸಿದ್ದರಿಂದ ಸಂತೋಷಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನನ್ನ ಪ್ರಾಣವು ಯೆಹೋವ ದೇವರಲ್ಲಿ ಉಲ್ಲಾಸಗೊಂಡು, ದೇವರ ರಕ್ಷಣೆಯಲ್ಲಿ ಸಂತೋಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:9
15 ತಿಳಿವುಗಳ ಹೋಲಿಕೆ  

ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ ಯೆಹೂದಸೀಮೆಯ ನಿವಾಸಿಗಳು ಆನಂದಪಡಲಿ.


ಆತನಲ್ಲಿ ನಮ್ಮ ಹೃದಯವು ಸಂತೋಷಿಸುವದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಲುಗಳಲ್ಲಿ ಹರ್ಷಿಸುವೆನು.


ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು