ಕೀರ್ತನೆಗಳು 36:1 - ಕನ್ನಡ ಸತ್ಯವೇದವು J.V. (BSI)1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ. ಅಧ್ಯಾಯವನ್ನು ನೋಡಿ |
ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.