Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:2 - ಕನ್ನಡ ಸತ್ಯವೇದವು J.V. (BSI)

2 ಅದು ಅವನನ್ನು ವಂಚಿಸಿ - ನಿನ್ನ ತಪ್ಪು ಬೈಲಿಗೆ ಬರುವದಿಲ್ಲ. ಹೇಯವಾಗುವದಿಲ್ಲ ಎಂದು ಊದಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:2
15 ತಿಳಿವುಗಳ ಹೋಲಿಕೆ  

ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ಸಿರಿ ಬಂದಾಗ ಹೆರರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ ಜನಸ್ತುತಿಯಿಂದಲೂ ಕೂಡಿದವನಾದರೂ


ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಅರಸನಾಗಲಿ ಸುರಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು