ಕೀರ್ತನೆಗಳು 36:6 - ಕನ್ನಡ ಸತ್ಯವೇದವು J.V. (BSI)6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ. ಅಧ್ಯಾಯವನ್ನು ನೋಡಿ |