Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:11 - ಕನ್ನಡ ಸತ್ಯವೇದವು J.V. (BSI)

11 ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು; ಸಮಾಧಾನವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು. ದೀನರು ಬಹಳ ಸಮಾಧಾನವನ್ನೂ ಸಮೃದ್ಧಿಯನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:11
16 ತಿಳಿವುಗಳ ಹೋಲಿಕೆ  

ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.


ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.


ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಅವನ ದಿವಸಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ಅವನು ಸುಖದಿಂದಲೇ ಇರುವನು; ಅವನ ಸಂತತಿಯವರು ದೇಶವನ್ನು ಅನುಭವಿಸುವರು.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಇವುಗಳೇ ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು, ಬರೀ ಉಸಿರಾದರೂ ಒಯ್ಯುವದು. ನನ್ನನ್ನು ಆಶ್ರಯಿಸುವವನೋ ದೇಶವನ್ನನುಭವಿಸಿ ನನ್ನ ಪರಿಶುದ್ಧಪರ್ವತವನ್ನು ಬಾಧ್ಯವಾಗಿ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು