Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:14 - ಕನ್ನಡ ಸತ್ಯವೇದವು J.V. (BSI)

14 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:14
15 ತಿಳಿವುಗಳ ಹೋಲಿಕೆ  

ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ನೀವು - ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ;


ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು; ಯಥಾರ್ಥವಂತರ ಪ್ರಾಣಕ್ಕೂ ಹೊಂಚುಹಾಕುವರು.


ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು.


ಇದಲ್ಲದೆ ಅವನು ದಾವೀದನಿಗೆ - ನೀನು ನನಗಿಂತ ನೀತಿವಂತನು; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೇದನ್ನೇ ಮಾಡಿದಿ.


ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು