Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:17 - ಕನ್ನಡ ಸತ್ಯವೇದವು J.V. (BSI)

17 ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೆಂದರೆ ದುಷ್ಟರು ನಾಶವಾಗುವರು. ನೀತಿವಂತರನ್ನಾದರೋ ಯೆಹೋವನು ಪರಿಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:17
14 ತಿಳಿವುಗಳ ಹೋಲಿಕೆ  

ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸಿರುವದು; ನಿನ್ನ ಬಲಗೈ ನನಗೆ ಆಧಾರವಾಗಿರುವದು.


ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.


ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ದುಷ್ಟನ ಭುಜಬಲವನ್ನು ಮುರಿದುಹಾಕು; ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲ ಮಾಡಿಬಿಡು.


ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.


ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವದು, ಎತ್ತಿದ ಕೈ ಮುರಿಯುವದು.


ನಾನು ನಿನ್ನ ಮತ್ತು ನಿನ್ನ ಮನೆಯವರ ಬಾಹುಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದಿಲ್ಲ.


ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು