Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:31 - ಕನ್ನಡ ಸತ್ಯವೇದವು J.V. (BSI)

31 ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವದು; ಅವನು ಜಾರುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನ ಎದೆಯಲ್ಲಿದೆ ದೇವರ ನಿಯಮ I ನೆಲೆತಪ್ಪದು ಅವನ ನಡತೆಯ ಕ್ರಮ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನ ಉಪದೇಶವು ನೀತಿವಂತನ ಹೃದಯದಲ್ಲಿರುತ್ತದೆ. ಅವನು ನೀತಿಮಾರ್ಗದಲ್ಲಿ ನಡೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನ ದೇವರ ನಿಯಮವೂ ಅವನ ಹೃದಯದಲ್ಲಿ ಇದೆ; ಅವನ ಹೆಜ್ಜೆ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:31
20 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.


ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.


ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ತಂದೆಯು ನನಗೆ ಬೋಧಕನಾಗಿ ಹೀಗೆಂದನು - ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.


ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ; ಸದಾಕಾಲವೂ ಅವೇ ನನಗಿವೆ.


ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಕಾಲು ನಿನ್ನ ದಾರಿಯಿಂದ ಅಗಲಲಿಲ್ಲ.


ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದ ಪಡುವವನಾಗಿ ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವನೋ ಅವನು ಎಷ್ಟೋ ಧನ್ಯನು.


ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ಮೂಢನು ಯಾವ ಮಾತನ್ನಾದರೂ ನಂಬುವನು; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.


ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.


ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಹುಟ್ಟುಗಳನ್ನು ರೂಪಿಸಿ ಕಿತ್ತೀಮ್ ದ್ವೀಪದ ತಿಲಕದ ಹಲಿಗೆಯಿಂದ ನಿನ್ನ ಮೇಲ್ಮಾಳಿಗೆಯನ್ನು ಕಟ್ಟಿ ದಂತದಿಂದ ಕೆತ್ತಿದರು.


ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು ಧಾರಾಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು