Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:38 - ಕನ್ನಡ ಸತ್ಯವೇದವು J.V. (BSI)

38 ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನಾಶವಾಗುವುದು ನಿಜ, ದೋಷಿಗಳ ಮನೆತನ I ನಿರ್ಮೂಲವಾಗುವುದು ದುರುಳರ ಸಂತಾನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಧರ್ಮಶಾಸ್ತ್ರವನ್ನು ಉಲ್ಲಂಘಿಸುವವರು ಸಂಪೂರ್ಣವಾಗಿ ನಾಶವಾಗುವರು. ಅವರ ಮಕ್ಕಳೂ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರಿಗೆ ಒಳ್ಳೆಯ ಭವಿಷ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:38
10 ತಿಳಿವುಗಳ ಹೋಲಿಕೆ  

ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.


ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.


ರೆಮಲ್ಯನ ಮಗನಾದ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು