Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:40 - ಕನ್ನಡ ಸತ್ಯವೇದವು J.V. (BSI)

40 ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿಬಿಡುವನು; ಅವರು ಆತನ ಆಶ್ರಿತರಾದ್ದರಿಂದ ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:40
13 ತಿಳಿವುಗಳ ಹೋಲಿಕೆ  

ಹೆಣ್ಣುಹಕ್ಕಿಗಳು ಹಾರಿಯಾಡುತ್ತಾ [ಮರಿಗಳನ್ನು] ಕಾಪಾಡುವಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು, ಹಾದು ಹೋಗುತ್ತಾ ಅಪಾಯದಿಂದ ತಪ್ಪಿಸುವನು.


ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.


ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು ತಾವೇ ನೆಲಕ್ಕೆ ಬಿದ್ದುಹೋದರು.


ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.


ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವದಿಲ್ಲ.


ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು