Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:8 - ಕನ್ನಡ ಸತ್ಯವೇದವು J.V. (BSI)

8 ಕೋಪವನ್ನು ಅಣಗಿಸಿಕೋ; ರೋಷವನ್ನು ಬಿಡು. ಉರಿಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೋಪದಿಂದಿರಬೇಡ! ರೋಷದಿಂದಿರಬೇಡ! ಉರಿಗೊಳ್ಳಬೇಡ! ಅವು ನಿನ್ನನ್ನು ಕೆಡುಕಿಗೆ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:8
18 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;


ಈಗಲಾದರೋ ಕ್ರೋಧ ಕೋಪ ಮತ್ಸರ ದೂಷಣೆ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.


ಕರಕರೆಯಿಂದ ಮೂರ್ಖನಿಗೆ ನಾಶನವು. ರೋಷದಿಂದ ಮೂಢನಿಗೆ ಮರಣವು ಸಂಭವಿಸುವದಲ್ಲವೇ.


ಇದರಿಂದ ಯೋನನಿಗೆ ಬಹು ಕರಕರೆಯಾಯಿತು;


ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.


ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರಗಬೇಕೋ?


ನಾನು ಈ ಪ್ರಕಾರ ಬಾಯಿಬಿಡುವದಕ್ಕೆ ಮನಸ್ಸು ಮಾಡಿಕೊಂಡಿದ್ದರೆ ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.


ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.


ಭರವಸವುಳ್ಳವನಾಗಿಯೇ ಇದ್ದೆನು.


ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು