Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೋಪದಿಂದೆನ್ನ ಪ್ರಭು, ಬೈಯಬೇಡ I ರೋಷದಿಂದೆನ್ನನು ದಂಡಿಸಲು ಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ; ಮನನೊಂದು ನನ್ನನ್ನು ಶಿಕ್ಷಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:1
11 ತಿಳಿವುಗಳ ಹೋಲಿಕೆ  

ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗ ಬಂದು ಸಹಾಯಮಾಡು.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.


ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದೀ. ಸೆಲಾ.


ಯೆಹೋವನು ನಿಮ್ಮ ಮೇಲೆ ಬಹುಕೋಪವನ್ನು ಮಾಡಿ ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದದರಿಂದ ನಾನು ಹೆದರಿಕೊಂಡೆನು. ಆದರೆ ಆ ಕಾಲದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು