Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:10 - ಕನ್ನಡ ಸತ್ಯವೇದವು J.V. (BSI)

10 ನನ್ನ ಗುಂಡಿಗೆ ಬಡುಕೊಳ್ಳುತ್ತದೆ; ನನ್ನ ಚೈತನ್ಯವು ಕುಗ್ಗಿಹೋಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಡಿದುಕೊಳ್ಳುತಿದೆ ಹೃದಯ, ಹುದುಗಿಹೋಗಿದೆ ಚೇತನ I ಮಬ್ಬಾಗಿ ಹೋಗಿದೆ ನನ್ನೆರಡು ನಯನಸಾಧನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:10
12 ತಿಳಿವುಗಳ ಹೋಲಿಕೆ  

ದುಃಖದಿಂದ ನನ್ನ ಕಣ್ಣು ಡೊಗರಾಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಮೊಬ್ಬಾಯಿತು.


ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಯೊಡ್ಡಿ ನಿನಗೆ ಮೊರೆಯಿಡುತ್ತೇನೆ.


ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು.


ನೀರು ಸುರಿದು ಸುರಿದು ನನ್ನ ಕಣ್ಣು ಇಂಗಿಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಯುವತಿಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದದರಿಂದ ನನ್ನ ಕರುಳು ಕರಗಿದೆ.


ನನ್ನ ಹೃದಯವು ಭ್ರಮೆಗೊಂಡಿದೆ, ನಡುಕವು ನನ್ನನ್ನು ಆಕ್ರವಿುಸಿದೆ, ನಾನು ಅಪೇಕ್ಷಿಸುತ್ತಿದ್ದ ಸಂಜೆಹೊತ್ತೇ ನನಗೆ ಭಯಂಕರವಾಗಿ ಪರಿಣವಿುಸಿದೆ.


ನಿನ್ನ ರಕ್ಷಣೆಯನ್ನೂ ನಿನ್ನ ನೀತಿಯುಳ್ಳ ನುಡಿಯು ನೆರವೇರುವದನ್ನೂ ನಿರೀಕ್ಷಿಸುತ್ತಾ ನನ್ನ ದೃಷ್ಟಿ ಮೊಬ್ಬಾಯಿತು.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ.


ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಯಿತು; ನನ್ನ ಎಲುಬುಗಳು ಸವೆದುಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು