Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:3 - ಕನ್ನಡ ಸತ್ಯವೇದವು J.V. (BSI)

3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥವೇ ತಪ್ಪಿಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ದೇಹದಲ್ಲಿಲ್ಲ ಸೌಖ್ಯ ನಿನ್ನ ಕೋಪದ ನಿಮಿತ್ತ I ನನ್ನೆಲುಬಿನಲ್ಲಿಲ್ಲ ಕ್ಷೇಮ ನನ್ನ ಪಾಪದ ಪ್ರಯುಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ. ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:3
13 ತಿಳಿವುಗಳ ಹೋಲಿಕೆ  

ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದ ಪಡುವವು.


ನಿಟ್ಟುಸುರಿನಿಂದ ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.


ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ. ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟು ಹೋಗುತ್ತವೆ.


ಧೂಪಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದಿದ್ದ ಉಜ್ಜೀಯನು ಕೋಪವುಳ್ಳವನಾದನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು ಯಾಜಕರೊಡನೆ ಸಿಟ್ಟಿನಿಂದ ಮಾತಾಡುತ್ತಿರುವಾಗ ಯಾಜಕರ ಸಮಕ್ಷದಲ್ಲೇ ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.


ಸರ್ವಶಕ್ತನ ಬಾಣಗಳು ನನ್ನಲ್ಲಿ ನಾಟಿರುತ್ತವೆ; ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು