Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಅಪರಾಧಗಳು ನನ್ನನ್ನು ಮುಣುಗಿಸಿ ಬಿಟ್ಟವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತೆ ನನ್ನನ್ನು ಅದಿವಿುಬಿಟ್ಟವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:4
9 ತಿಳಿವುಗಳ ಹೋಲಿಕೆ  

ಯಾಕಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವದಿಲ್ಲ. ಅವು ನನ್ನ ತಲೇ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.


ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.


ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆತನ ಕೈ ನನ್ನ ದ್ರೋಹಗಳನ್ನು ನೊಗದ ಕಣ್ಣಿಗಳನ್ನೋ ಎಂಬಂತೆ ನನಗೆ ಬಿಗಿದಿದೆ. ಅವು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವೇ ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವದಿಲ್ಲ. ಅದು ಹೇಯವಾದದ್ದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.


ಇದಲ್ಲದೆ ಸಂಕಟದಿಂದಲೂ ನಿತ್ಯವಾದ ಅಸ್ಥಿಪೀಡನದಿಂದಲೂ ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.


ಮೂರ್ಖರು ಅಪರಾಧದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು