Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:5 - ಕನ್ನಡ ಸತ್ಯವೇದವು J.V. (BSI)

5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು ಕೀವು ಸೋರಿ ದುರ್ವಾಸನೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೀವು ಸೋರಿ ನಾರುತ್ತಿವೆ ನನ್ನ ಪಾಪದ ಗಾಯಗಳು I ಇದಕ್ಕೆಲ್ಲ ಕಾರಣವು ನನ್ನ ಮೂರ್ಖತನವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು. ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಮೂರ್ಖತನದ ನಿಮಿತ್ತ ನನಗಾದ ಗಾಯಗಳು ದುರ್ವಾಸನೆಯಿಂದ ಕೀವು ತುಂಬಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:5
8 ತಿಳಿವುಗಳ ಹೋಲಿಕೆ  

ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.


ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.


ನಾನು [ನನ್ನ ಪಾಪವನ್ನು] ಅರಿಕೆಮಾಡದೆ ಇದ್ದಾಗ ದಿನವೆಲ್ಲಾ ನರಳುವದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.


ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.


ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗ ಬಂದು ಸಹಾಯಮಾಡು.


ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು