ಕೀರ್ತನೆಗಳು 39:12 - ಕನ್ನಡ ಸತ್ಯವೇದವು J.V. (BSI)12 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ ಪರದೇಶದವನೂ ಆಗಿದ್ದೇನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಗೆ ಕಿವಿಗೊಡಿರಿ; ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ; ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ; ನಾನೂ ಪ್ರವಾಸಿಯಾಗಿದ್ದೇನೆ. ಅಧ್ಯಾಯವನ್ನು ನೋಡಿ |