ಕೀರ್ತನೆಗಳು 39:4 - ಕನ್ನಡ ಸತ್ಯವೇದವು J.V. (BSI)4 ಯೆಹೋವನೇ, ನನಗೆ ಅವಸಾನವುಂಟೆಂದೂ ನನ್ನ ಜೀವಮಾನವು ಅತ್ಯಲ್ಪವೆಂದೂ ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನನ್ನ ಜೀವಾಯುಸ್ಸು ಎನಿತು? ನನ್ನ ಬಾಳಿನ ಮುಗಿವೆಂದು? I ತಿಳಿಯಪಡಿಸು ನನಗೆ ಪ್ರಭು, ನಾನು ಬಲು ಅಸ್ಥಿರನೆಂದು” II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನೇ, ನನ್ನ ಗತಿಯನ್ನು ತಿಳಿಸು! ನನ್ನ ಈ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು? ನಾನೆಷ್ಟು ಕಾಲ ಬದುಕುವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಜೀವನದ ಅಂತ್ಯವ ನನಗೆ ತೋರಿಸಿಕೊಡಿರಿ, ನನ್ನ ದಿನಗಳು ಕೊಂಚವೆಂಬುದನ್ನೂ ನನಗೆ ತಿಳಿಸಿರಿ. ಅಧ್ಯಾಯವನ್ನು ನೋಡಿ |