ಕೀರ್ತನೆಗಳು 39:6 - ಕನ್ನಡ ಸತ್ಯವೇದವು J.V. (BSI)6 ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು. ಅಧ್ಯಾಯವನ್ನು ನೋಡಿ |