Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:8 - ಕನ್ನಡ ಸತ್ಯವೇದವು J.V. (BSI)

8 ನಾನು ನಿರ್ಭಯವಾಗಿರುವದರಿಂದ ಮಲಗಿಕೊಂಡು ಕೂಡಲೆ ನಿದ್ದೆ ಮಾಡುವೆನು; ಯಾಕಂದರೆ ಯೆಹೋವನೇ, ನಾನು ಯಾವ ಅಪಾಯವೂ ಇಲ್ಲದೆ ಸುರಕ್ಷಿತನಾಗಿರುವಂತೆ ನೀನು ಕಾಪಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:8
16 ತಿಳಿವುಗಳ ಹೋಲಿಕೆ  

ನೀನು ಮಲಗುವಾಗ ಹೆದರಿಕೆ ಇರುವದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.


ಯೆಹೋವನು ನನ್ನನ್ನು ಕಾಪಾಡುವವನಾದ್ದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.


ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.


ಆದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ


ಕಣತುಳಿಸುವ ಕೆಲಸವು ದ್ರಾಕ್ಷೆಯಬೆಳೆಯ ಪರ್ಯಂತರವೂ ದ್ರಾಕ್ಷೆಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವವು; ನೀವು ಸಮೃದ್ಧಿಯಾಗಿ ಊಟಮಾಡುವಿರಿ. ನಿಮ್ಮ ದೇಶದಲ್ಲಿ ನಿರ್ಭಯವಾಗಿ ವಾಸಮಾಡುವಿರಿ;


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು, ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು