Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:12 - ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವದಿಲ್ಲ. ಅವು ನನ್ನ ತಲೇ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:12
13 ತಿಳಿವುಗಳ ಹೋಲಿಕೆ  

ನನ್ನ ಅಪರಾಧಗಳು ನನ್ನನ್ನು ಮುಣುಗಿಸಿ ಬಿಟ್ಟವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತೆ ನನ್ನನ್ನು ಅದಿವಿುಬಿಟ್ಟವೆ.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ನಿಷ್ಕಾರಣದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರ್ನಿವಿುತ್ತವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡತೆಗೆದುಕೊಂಡರಲ್ಲಾ.


ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಆಕಾಶದ ಶಕ್ತಿಗಳು ಕದಲುವದರಿಂದ ಮನುಷ್ಯರು ಭಯ ಹಿಡಿದವರಾಗಿ ಲೋಕಕ್ಕೆ ಏನು ಬರುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.


ಅವನು ಅಣ್ಣತಮ್ಮಂದಿರಿಗೆ - ನಾನು ಕೊಟ್ಟ ಹಣವು ಹಿಂದಕ್ಕೆ ಬಂದದೆ; ಇಗೋ, ನನ್ನ ಚೀಲದಲ್ಲಿದೆ ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ - ದೇವರು ನಮಗೆ ಮಾಡಿದ್ದು ಇದೇನು ಅಂದರು.


ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು