Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:3 - ಕನ್ನಡ ಸತ್ಯವೇದವು J.V. (BSI)

3 ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ, ಆ ಹಾಡು ನಮ್ಮ ದೇವರ ಸ್ತೋತ್ರವೇ. ಅನೇಕರು ಇದನ್ನು ಕಂಡು, ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:3
18 ತಿಳಿವುಗಳ ಹೋಲಿಕೆ  

ಆತನ ಘನಕ್ಕಾಗಿ ನೂತನಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.


ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ -


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು; ಹತ್ತು ತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿ ಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.


ಸೆರೆಯಿಂದ ನನ್ನನ್ನು ಬಿಡಿಸು; ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.


ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.


ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು.


ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು; ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು