Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ದೇವರಾದ ಯೆಹೋವ ದೇವರೇ, ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ! ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ, ನಿಮಗೆ ಸರಿಸಾಟಿ ಯಾರೂ ಇಲ್ಲ. ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ, ಅವು ಎಣಿಸಲು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:5
14 ತಿಳಿವುಗಳ ಹೋಲಿಕೆ  

ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.


ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆತನೊಬ್ಬನೇ ಶಕ್ತನು; ಆತನ ಕೃಪೆಯು ಶಾಶ್ವತವಾದದ್ದು.


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವದಿಲ್ಲ.


ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?


ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು