Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನೇ, ಅವನನ್ನು ಶತ್ರುಗಳ ಅಧೀನಕ್ಕೆ ಕೊಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:2
16 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ಯೆಹೋವನ ಆಶೀರ್ವಾದವು ಯಾರಿಗಿರುವದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವದೋ ಅವರು ತೆಗೆದುಹಾಕಲ್ಪಡುವರು.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಅತ್ತೆಯು - ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ ಎನ್ನಲು ರೂತಳು - ನಾನು ಯಾವನ ಹೊಲದಲ್ಲಿ ಹಕ್ಕಲಾಯ್ದೆನೋ ಅವನ ಹೆಸರು ಬೋವಜನೆಂದು ತಿಳಿಸಿದಳು.


ಪರೋಪಕಾರವು ತನಗೂ ಉಪಕಾರ; ಕ್ರೂರನು ತನ್ನ ಶರೀರವನ್ನೂ ಹಿಂಸಿಸುವನು.


ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಬಡವರಿಗಾಗಿ ಕೈ ಬಿಚ್ಚಿ ದಿಕ್ಕಿಲ್ಲದವರಿಗೆ ಕೈ ನೀಡುವಳು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು