Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:3 - ಕನ್ನಡ ಸತ್ಯವೇದವು J.V. (BSI)

3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ ಆರೋಗ್ಯವನ್ನುಂಟುಮಾಡಿದಿಯಲ್ಲಾ, ಸ್ವಾಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ರೋಗದಿ ಹಾಸಿಗೆ ಹಿಡಿದಿರಲು ಪ್ರಭು ಸುಧಾರಿಸುವನು I ರೋಗ ನಿವಾರಿಸಿ ಅವನಿಗೆ ಆರೋಗ್ಯವನೀಯುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು; ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:3
7 ತಿಳಿವುಗಳ ಹೋಲಿಕೆ  

ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರಮಾಡುವದಕ್ಕೆ ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು.


ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ ಆತನು ಇಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯ ಭಕ್ತಿಯುಳ್ಳವರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು