Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:5 - ಕನ್ನಡ ಸತ್ಯವೇದವು J.V. (BSI)

5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು - ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆಹೋದೀತು ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಇವನ ಸಾವೆಂದು? ಇವ ನಿರ್ನಾಮವಾಗುವದೆಂತು?” I ನನಗೆ ಕೇಡು ಬಯಸುವವರ ಕುಹಕ ನುಡಿಯಿದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದುಹೋಗುತ್ತದೆ” ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಅವನು ಸತ್ತು ಅವನ ಹೆಸರು ನಾಶವಾಗುವುದು ಯಾವಾಗ?” ಎಂದು ನನ್ನ ಶತ್ರುಗಳು ನನ್ನ ಕೇಡನ್ನು ಬಯಸಿ ಮಾತನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:5
13 ತಿಳಿವುಗಳ ಹೋಲಿಕೆ  

ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.


ನನ್ನ ಪ್ರಾಣವನ್ನು ತೆಗೆಯಬೇಕೆಂಬವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.


ತನ್ನ ಮಲದ ಹಾಗೆ ನಿತ್ಯನಾಶನವನ್ನು ಹೊಂದುವನು, ಅವನನ್ನು ಕಂಡವರು ಕೂಡ ಅವನೆಲ್ಲಿಯೋ ಅನ್ನುವರು.


ಅವನ ಸ್ಮರಣೆಯು ಭೂವಿುಯಲ್ಲಿ ಅಳಿದುಹೋಗುವದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ನಿಲ್ಲುವದಿಲ್ಲ.


ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಮಂದಿ.


ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಿದ್ಧಿಗೆ ತರುವ ದೇವರನ್ನು ಕೂಗಿಕೊಳ್ಳುವೆನು.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.


ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು