Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:6 - ಕನ್ನಡ ಸತ್ಯವೇದವು J.V. (BSI)

6 ಅವರಲ್ಲೊಬ್ಬನು ನನ್ನನ್ನು ನೋಡುವದಕ್ಕೆ ಬಂದರೆ ಕಪಟದ ಮಾತನ್ನಾಡುವನು; ಮನಸ್ಸಿನಲ್ಲಿ ಅಶುಭಗಳನ್ನು ಸಂಗ್ರಹಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನನ್ನು ನೋಡಲು ಬಂದವರು ಕಪಟದ ಮಾತನ್ನಾಡುವರು; ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:6
9 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು