Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:6 - ಕನ್ನಡ ಸತ್ಯವೇದವು J.V. (BSI)

6 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೊನ್ ಪರ್ವತ, ವಿುಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ. ಆದ್ದರಿಂದ ಹೆರ್ಮೊನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ ಮಿಸ್ಸಾರ್ ಬೆಟ್ಟದಲ್ಲಿಯೂ ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗಿಹೋಗಿದೆ; ಆದ್ದರಿಂದ ಯೊರ್ದನ್ ನಾಡಿನಿಂದಲೂ ಹೆರ್ಮೋನ್ ಬೆಟ್ಟಗಳಿಂದಲೂ ಮಿಸಾರ್ ಬೆಟ್ಟದಿಂದಲೂ ನಿಮ್ಮನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:6
14 ತಿಳಿವುಗಳ ಹೋಲಿಕೆ  

ನಾನು ಎದೆಗುಂದಿದವನಾಗಿ ಭೂವಿುಯ ಕಡೇ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.


ನನ್ನ ಆತ್ಮವು ನನ್ನಲ್ಲಿ ಕುಂದಿದಾಗ ಯೆಹೋವನಾದ ನಿನ್ನನ್ನು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ನಿನ್ನ ಪರಿಶುದ್ಧಾಲಯಕ್ಕೆ ಸೇರಿತು.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯಮಾಡದೆಯೂ ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ಆಗ ದಾವೀದನೂ ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್‍ಹೊಳೆಯನ್ನು ದಾಟಿದರು. ಉದಯವಾದಾಗ ದಾಟಬೇಕಾದವನೊಬ್ಬನೂ ಇರಲಿಲ್ಲ.


ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ದಾವೀದನು ಮಹನಯಿವಿುಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು