Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:13 - ಕನ್ನಡ ಸತ್ಯವೇದವು J.V. (BSI)

13 ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದ್ದೀ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ ಕುಚೋದ್ಯಕ್ಕೂ ಈಡಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪರರು ನಮ್ಮನು ಜರೆಯುವಂತೆ ಮಾಡಿರುವೆ I ನೆರೆಯವರ ಪರಿಹಾಸ್ಯಕ್ಕೆ ಗುರಿಪಡಿಸಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಮ್ಮ ನೆರೆಯವರಿಗೆ ನಾವು ನಿಂದೆಯಾಗಿದ್ದೇವೆ. ನಮ್ಮ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವೂ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:13
10 ತಿಳಿವುಗಳ ಹೋಲಿಕೆ  

ಸುತ್ತಣ ಜನಾಂಗಗಳಿಗೆ ನಮ್ಮನ್ನು ಕಚ್ಚಾಟದ ಹೇತುವನ್ನಾಗಿಯೂ ಶತ್ರುನಿಂದೆಗೆ ಗುರಿಯನ್ನಾಗಿಯೂ ಮಾಡಿದಿ.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣವರ ಪರಿಹಾಸ್ಯ ಕುಚೋದ್ಯಗಳಿಗೆ ಗುರಿಯಾದೆವು.


ಇಸ್ರಾಯೇಲು ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೇನು? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವದನ್ನೂ ಜ್ಞಾಪಿಸಿಕೋ.


ದಾರಿಗರೆಲ್ಲರೂ ಅವನನ್ನು ಸುಲಿಗೆಮಾಡುತ್ತಾರೆ; ಸುತ್ತಣವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.


ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು