Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:12 - ಕನ್ನಡ ಸತ್ಯವೇದವು J.V. (BSI)

12 ತೂರ್ ಸಂಸ್ಥಾನದವರು ಕಾಣಿಕೆಗಳಿಂದ ನಿನ್ನನ್ನು ಸನ್ಮಾನಿಸುವರು; ಪ್ರಜೆಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತೂರ್ ಪಟ್ಟಣದ ಶ್ರೀಮಂತರು ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು; ಐಶ್ವರ್ಯವಂತರು ನಿನ್ನನ್ನು ವರಿಸಲು ಹುಡುಕಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:12
12 ತಿಳಿವುಗಳ ಹೋಲಿಕೆ  

ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣುಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಜನಾಂಗಗಳು ನಿನ್ನ ಬೆಳಕಿಗೆ ನೆರೆಯುವವು, ಅರಸರು ನಿನ್ನಲ್ಲಿನ ಉದಯಪ್ರಕಾಶಕ್ಕೆ ಬರುವರು.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.


ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.


ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.


ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಕುಂಕುಮ ಹೂವುಗಳ ಮಧ್ಯದಲ್ಲಿ ವಾಸಿಸುವ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು