Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:14 - ಕನ್ನಡ ಸತ್ಯವೇದವು J.V. (BSI)

14 ಆಕೆಯು ಬೂಟೇದಾರೀ ಕಸೂತಿಕೆಲಸದ ವಸ್ತ್ರಗಳನ್ನು ಧರಿಸಿಕೊಂಡು ಸಖಿಯರಾದ ಕನ್ಯೆಯರ ಪರಿವಾರದೊಡನೆ ಅರಸನ ಬಳಿಗೆ ಬರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಭೂಷಿತಳಾಗಿಹಳಾಕೆ ಕಸೂತಿಕೆಲಸದ ವಸ್ತ್ರಗಳಿಂದ I ಬರುತಿಹಳು ರಾಜನ ಬಳಿಗೆ ಸಖಿಯರ ಪರಿವಾರ ಸಮೇತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಕೆಯು ಕಸೂತಿ ರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು ತನ್ನ ಸಖಿಯರಾದ ಕನ್ಯಾಪರಿವಾರದೊಡನೆ ರಾಜನ ಬಳಿಗೆ ಬರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕಸೂತಿ ಉಡುಪುಗಳಲ್ಲಿ ಮಹಾರಾಜರ ಬಳಿಗೆ ಆಕೆಯು ಹೊರಡುತ್ತಾಳೆ, ಅವಳ ಸಂಗಡ ಸಖಿಯರಾದ ಕನ್ಯೆಯರು ಸಹ ಹೊರಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:14
13 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ಉದ್ಯಾನವಾಸಿನಿಯೇ, ಗೆಳೆಯರು ನಿನ್ನ ದನಿ ಕೇಳಬೇಕೆಂದಿದ್ದಾರೆ; ನನಗೆ ಕೇಳಿಸಲಿ.


ಶೂಲಮ್ ಊರಿನವಳೇ, ತಿರುಗು, ತಿರುಗು; ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು; ಎದುರುಬದುರಿನ ನಾಟ್ಯವನ್ನು ನೋಡುವಷ್ಟು ಆಶೆಯಿಂದ ಶೂಲಮ್ ಊರಿನವಳಾದ ನನ್ನನ್ನು ಏಕೆ ನೋಡಬೇಕು!


ಅರುವತ್ತು ಮಂದಿ ರಾಣಿಯರೂ ಎಂಭತ್ತು ಜನ ಉಪಪತ್ನಿಯರೂ ಲೆಕ್ಕವಿಲ್ಲದ ಯುವತಿಯರೂ ನನಗುಂಟು.


ಮಹಿಳಾಮಣಿಯೇ, ನಿನ್ನಿನಿಯನು ಎಲ್ಲಿ ಹೋದನು? ನಾವು ನಿನ್ನೊಂದಿಗೆ ಅವನನ್ನು ಹುಡುಕುವಂತೆ ತಿಳಿಸು. ನಿನ್ನ ನಲ್ಲನು ಎಲ್ಲಿಗೆ ತೆರಳಿರುವನು?


ಯೆರೂಸಲೇವಿುನ ಸ್ತ್ರೀಯರೇ, ಉಚಿತಕಾಲಕ್ಕೆ ಮುಂಚೆ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸಬಾರದೆಂದು ಅಡವಿಯ ಹುಲ್ಲೆಗಳ ಮೇಲೆಯೂ ಹರಿಣಿಗಳ ಮೇಲೆಯೂ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಆರೋನನು ಧರಿಸಬೇಕಾದ ನಿಲುವಂಗಿಯನ್ನು ನಾರಿನಿಂದ ವಿಚಿತ್ರವಾಗಿ ನೇಯಿಸಬೇಕು; ಅವನ ಮುಂಡಾಸವನ್ನು ನಾರಿನಿಂದ ಮಾಡಿಸಬೇಕು; ಅವನ ನಡುಕಟ್ಟನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ನಿಶ್ಚಯವಾಗಿ ಅವರಿಗೆ ಕೊಳ್ಳೆಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ಸೈನಿಕನಿಗೆ ಒಬ್ಬಿಬ್ಬರು ದಾಸಿಯರೂ ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ವಸ್ತ್ರಗಳೂ ಕಂಠಮಾಲೆಯೂ ದೊರಕಿರುತ್ತವೆ ಎಂಬದೇ.


ಅಂಗಳದ ಬಾಗಲಲ್ಲೇ ಇಪ್ಪತ್ತು ಮೊಳದ ಪರದೆಯು ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಬುಟೇದಾರೀ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೇ ಕಲ್ಲುಗಳೂ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು