Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಹೆಸರು ಯಾವಾಗಲೂ ಜ್ಞಾಪಕದಲ್ಲಿರುವಂತೆ ನಾನು ಮಾಡುವೆನು; ಆದದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ನಾಮಸ್ಮರಣೆಯನುಳಿಸುವೆನು ಚಿರಕಾಲ I ಹೊಗಳುವರು ಸಕಲ ಜನರು ನಿನ್ನನು ಅನುಗಾಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿನ್ನ ಹೆಸರನ್ನು ಯಾವಾಗಲೂ ಪ್ರಖ್ಯಾತಿಪಡಿಸುವೆನು; ಜನಾಂಗಗಳು ನಿನ್ನನ್ನು ಸದಾಕಾಲ ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತಲತಲಾಂತರವೂ ನಿಮ್ಮ ಹೆಸರನ್ನು ನಾನು ಸ್ಮರಿಸುವಂತೆ ಮಾಡುವೆನು. ಆದ್ದರಿಂದ ಜನರು ಯುಗಯುಗಾಂತರವೂ ನಿಮ್ಮನ್ನು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:17
11 ತಿಳಿವುಗಳ ಹೋಲಿಕೆ  

ನೀನು ಯೆಹೋವನ ಕೈಯಲ್ಲಿ ಸುಂದರ ಕಿರೀಟವಾಗಿಯೂ ನಿನ್ನ ದೇವರ ಹಸ್ತದಲ್ಲಿ ರಾಜಶಿರೋವೇಷ್ಟನವಾಗಿಯೂ ಇರುವಿ.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವದೋ ಅಲ್ಲಲ್ಲಿ ಈಕೆ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ ಹೇಳುವರೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದು ಹೇಳಿದನು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ, ಇವಳು ತಾಯಿಗೆ ಏಕಪುತ್ರಿಯು, ಹೆತ್ತವಳಿಗೆ ಆಪ್ತಳು. ಯುವತಿಯರು ನೋಡಿದಾಗ ಧನ್ಯಳೆಂದು ಹೇಳಿದರು. ರಾಣಿಯರೂ ಉಪಸ್ತ್ರೀಯರೂ ಕಂಡಾಗ ಹೀಗೆ ಪ್ರಶಂಸಿಸಿದರು -


ಯೆಹೋವನೇ, ಭೂರಾಜರೆಲ್ಲರು ನೀನು ಉಸಿರಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು;


ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು