Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:6 - ಕನ್ನಡ ಸತ್ಯವೇದವು J.V. (BSI)

6 ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನಿನ್ನ ರಾಜದಂಡವು ನ್ಯಾಯಸ್ಥಾಪಕವಾದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:6
18 ತಿಳಿವುಗಳ ಹೋಲಿಕೆ  

ಪೂರ್ವದಿಂದಲೂ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಅನಾದಿಯಿಂದ ನೀನು ಇದ್ದೀ.


ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರ ಬಳಿಯಲ್ಲಿತ್ತು; ಆ ವಾಕ್ಯವು ದೇವರಾಗಿತ್ತು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವದು.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ ಮೋಡಗಳನ್ನು ಚದರಿಸಿಬಿಟ್ಟು ಮಳೆಬಿದ್ದ ಭೂವಿುಯಿಂದ ಹುಲ್ಲನ್ನು ಮೊಳಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.


ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡಕೋಣದಷ್ಟು ಬಲವುಳ್ಳವರು. ಅವರು ಶತ್ರುಜನಗಳನ್ನು ನಿರ್ಮೂಲಮಾಡುವರು; ವೈರಿಗಳ ಎಲುಬನ್ನು ಮುರಿದುಹಾಕುವರು; ಅವರನ್ನು ಬಾಣಗಳಿಂದ ಗಾಯಪಡಿಸುವರು.


ನನ್ನ ಬಾಣಗಳು ರಕ್ತವನ್ನು ಕುಡಿಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚಂಡಾಡುವದು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು