Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:8 - ಕನ್ನಡ ಸತ್ಯವೇದವು J.V. (BSI)

8 ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:8
20 ತಿಳಿವುಗಳ ಹೋಲಿಕೆ  

ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವದರಿಂದ ತರುಣಿಯರು ನಿನ್ನನ್ನು ಪ್ರೀತಿಸುವರು.


ಇದಲ್ಲದೆ ಮೊದಲು ಒಂದು ಸಾರಿ ರಾತ್ರಿವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತಕ್ಕೊಂಡು ಅಲ್ಲಿಗೆ ಬಂದನು.


ನಾನು ರಕ್ತಬೋಳದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ತೆರಳಿ ಹಗಲು ತಂಪಾಗಿ ನೆರಳು ಇಳಿಯುವ ತನಕ ಚರಿಸುತ್ತಿರುವೆನು.


ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ.


ನಾನು ಚಳಿಗಾಲದ ಅರಮನೆಯನ್ನೂ ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು; ದಂತಮಂದಿರಗಳು ಹಾಳಾಗುವವು, ಮಹಾಸೌಧಗಳು ಕೊನೆಗಾಣುವವು; ಇದು ಯೆಹೋವನ ನುಡಿ.


ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.


ನನ್ನ ನಲ್ಲನಿಗೆ ಕದತೆಗೆಯಬೇಕೆಂದು ಏಳಲು ಅಗುಳಿಯ ಹಿಡಿಗಳಲ್ಲಿ ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ಸುರಿಯಿತು.


ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು?


ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;


ದಮ್ಮಡಿಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತೀವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು ಇವುಗಳ ವಿವರವೂ ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವರು ಸಂಭ್ರಮೋತ್ಸವದಿಂದ ಬಂದು ಅರಮನೆಯೊಳಕ್ಕೆ ಪ್ರವೇಶಿಸುವರು.


ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು