Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:2 - ಕನ್ನಡ ಸತ್ಯವೇದವು J.V. (BSI)

2 ಪರಾತ್ಪರನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಅಧಿರಾಜನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:2
18 ತಿಳಿವುಗಳ ಹೋಲಿಕೆ  

ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವರು ಯೆಹೋವನ ಪೂಜ್ಯವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ಯೆಹೋವನು ಮಹಾದೇವರೂ ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲ್ಯರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ಭಯಂಕರನಾದ ಮಹಾದೇವರು.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಮನುಷ್ಯರು ನಿನ್ನ ಭಯಂಕರಕೃತ್ಯಗಳಲ್ಲಿ ಕಂಡುಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.


ಆತನು ಭೂಪತಿಗಳಿಗೆ ಭಯಪ್ರದನಾಗಿ ಪ್ರಭುಗಳ ಅಹಂಭಾವವನ್ನು ತೊಡೆದುಬಿಡುವನು.


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಭಯಂಕರ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೆ ಹೋದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು