Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:4 - ಕನ್ನಡ ಸತ್ಯವೇದವು J.V. (BSI)

4 ಆತನು ಯಾಕೋಬವಂಶದವರಾದ ನಮ್ಮನ್ನು ಪ್ರೀತಿಸಿ ನಾವು ಅಭಿಮಾನಿಸುವ ಸ್ವಾಸ್ತ್ಯವನ್ನು ನಿರ್ಣಯಿಸಿಕೊಟ್ಟಿದ್ದಾನೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:4
19 ತಿಳಿವುಗಳ ಹೋಲಿಕೆ  

ನಮ್ಮನ್ನು ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಯನ್ನು ಎದುರುನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿರುವದು.


(ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯವನ್ನು ಸಹ ಪುನರುಜ್ಜೀವನ ಮಾಡುವನು; ಸೂರೆಗಾರರು ಅವುಗಳನ್ನು ಸೂರೆಗೈದು ಅವುಗಳ ಶಾಖೆಗಳನ್ನು ಹಾಳುಮಾಡಿದ್ದರಷ್ಟೆ.)


ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು,


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.


ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.


ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.


ಆತನ ಸೇವಕರಿಗೆ ಅದು ಸ್ವಾಸ್ತ್ಯವಾಯಿತು; ಆತನ ಕೃಪೆಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು