Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:13 - ಕನ್ನಡ ಸತ್ಯವೇದವು J.V. (BSI)

13 ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು I ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದರ ಕೋಟೆಗಳನ್ನು ನೋಡಿರಿ. ಚೀಯೋನಿನ ಅರಮನೆಗಳನ್ನು ಹೊಗಳಿರಿ. ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:13
10 ತಿಳಿವುಗಳ ಹೋಲಿಕೆ  

ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ಇದನ್ನು ನಿಮ್ಮ ಮಕ್ಕಳಿಗೆ ವರ್ಣಿಸಿರಿ, ಅವರು ತಮ್ಮ ಮಕ್ಕಳಿಗೆ ವಿವರಿಸಲಿ, ಅವರು ಮುಂದಿನ ತಲೆಯವರಿಗೆ ತಿಳಿಸಲಿ.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ; ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.


ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು