Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:14 - ಕನ್ನಡ ಸತ್ಯವೇದವು J.V. (BSI)

14 ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:14
13 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡಿಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.


ನಾನು ಯೆಹೋವನನ್ನು ಕುರಿತು - ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ ಎಂತಲೂ


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ.


ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವದು ಎರಡು ದಿನವಾದರೂ ಒಂದು ತಿಂಗಳಾದರೂ ಒಂದು ವರುಷವಾದರೂ ಸರಿಯೇ, ಆ ಪರ್ಯಂತರವೂ ಇಸ್ರಾಯೇಲ್ಯರು ಪ್ರಯಾಣಮಾಡದೆ ಇಳುಕೊಂಡೇ ಇರುವರು; ಅದು ಎದ್ದಾಗ ಅವರು ಹೊರಡುವರು.


ಇಸ್ರಾಯೇಲ್ಯರು ಸದಾಕಾಲವೂ ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿ; ಯೆಹೋವನೇ, ನೀನು ಅವರಿಗೆ ದೇವರಾದಿ.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು